ತುಮಕೂರು : ಸದ್ಯಕ್ಕೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ವಿಚಾರ ಅಪ್ರಸ್ತುತ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ ತಿಂಗಳೊಳಗೆ ಬಿಬಿಎಂಪಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಆಗಬೇಕು ಎಂದು ಕೋರ್ಟ್ ಹೇಳಿದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸರ್ಕಾರಕ್ಕೆ ಜನ ಉತ್ತರ ಕೊಡುತ್ತಾರೆ. ಸಿಎಂ, ಡಿಸಿಎಂ ಸಚಿವರ ನಡುವೆ ಸಮನ್ವಯ ಇಲ್ಲ. ಅವರ ಒಳಜಗಳದಿಂದಲೇ ಚುನಾವಣೆ ಮುಂದೂಡುತ್ತಿರಬಹುದು. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯ ಬಗ್ಗೆ ನಾಯಕರು ನಿರ್ಧರಿಸುತ್ತಾರೆ. ಸಮನ್ವಯ ಸಮಿತಿ ಮಾಡಿ ಕಾರ್ಯಕರ್ತರಿಗೆ ಸಿಹಿ ಸುದ್ದಿ ನೀಡುತ್ತಾರೆ ಎಂದರು.
ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಕೆಲಸ ಮಾಡುತ್ತಿಲ್ಲ ಅನ್ನೋದಿದೆ. ವಯಸ್ಸಿಗೆ ಮೀರಿ ಎಚ್ ಡಿ ಕುಮಾರಸ್ವಾಮಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ವಿಚಾರ ಸದ್ಯಕ್ಕೆ ಅಪಪ್ರಸ್ತುತ. ಸದ್ಯಕ್ಕೆ ಜೆಡಿಎಸ್ ಅಧ್ಯಕ್ಷರಾಗಿ ಎಚ್ ಡಿ ಕುಮಾರಸ್ವಾಮಿ ಅವರೇ ಮುಂದುವರಿಯುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.