ಬೆಂಗಳೂರು : ಇದೆ ಜುಲೈ 4 ರಿಂದ್ ಮೂರು ದಿನ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿಕೆ ನೀಡಿದರು.ಈ ಒಂದು ಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
ಅಲ್ಲದೆ ಈ ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಈ ಒಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ ಜುಲೈ 4ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಒಂದು ಕಾರ್ಯಕಾರಿಣಿ ಸಭೆ ನಡೆಯುತ್ತದೆ.
ಜುಲೈ 5 ಮತ್ತು 6 ರಂದು ಸೋತ ಎಂಟು ಲೋಕಸಭಾ ಕ್ಷೇತ್ರಗಳ ಅವಲೋಕನ ಸಭೆ ನಡೆಯಲಿದೆ ಸೌತಕ್ಷೇತ್ರಗಳ ಮುಖಂಡರ ಜೊತೆಗೆ ಸಮಲೋಚನೆ ನಡೆಸಲಾಗುತ್ತದೆ ಮಂಡಲದ ಅಧ್ಯಕ್ಷ ಸ್ಥಾನದ ಮೇಲಿನ ಎಲ್ಲಾ ಪದಾಧಿಕಾರಿಗಳು ಬರಲಿದ್ದಾರೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ನಂದೀಶ್ ರೆಡ್ಡಿ ಹೇಳಿಕೆ ನೀಡಿದರು.