ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಯಾವುದೇ ಪಾತ್ರವಿಲ್ಲ ಎಂಬುದಾಗಿ ದೂರುದಾರೆ ಸುನೀತಾ ಚೌವ್ಹಾಣ್ ಸ್ಪಷ್ಟ ಪಡಿಸಿದ್ದಾರೆ.
ಇಂದು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಯಾವುದೇ ಪಾತ್ರವಿಲ್ಲ. ಬದಲಾಗಿ ಅವರ ಹೆಸರನ್ನು ಸಹೋದರ ಗೋಪಾಲ್ ಜೋಶಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದರು.
ತಾನು ಪ್ರಕರಣ ಸಂಬಂಧ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಆ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ಹಾಜರಾಗಿದ್ದೆನು. ವಂಚನೆ ಪ್ರಕರಣ ಸಂಬಂಧ ಪೊಲೀಸರು ಕೇಳಿದಂತ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ. ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ಕೊಟ್ಟಿದ್ದೇವೆ ಎಂಬುದಾಗಿ ಹೇಳಿದರು.
BREAKING: ಹಾಸನದ ಬಳಿ ‘CID ಡಿವೈಎಸ್ಪಿ’ ಕಾರು ಅಪಘಾತ: ‘ಮೊಹಮ್ಮದ್ ರಫಿ’ ಸ್ಥಿತಿ ಗಂಭೀರ
BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!