ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಮೈಸೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನೊಂದೆಡೆ ಸರಕಾರವು ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದರು. ಸರಕಾರವು ಸಂವಿಧಾನ ಮತ್ತು ಸುಪ್ರೀಂ ಕೋರ್ಟಿನ ತೀರ್ಪಿನ ವಿರುದ್ಧ ನಡೆದುಕೊಂಡಂತಾಗಿದೆ ಎಂದು … Continue reading ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ