ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟು 2 ಕೋಟಿ ಪಡೆದು, ವಂಚಿಸಿದಂತ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬಸವೇಶ್ವನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಪ್ರಕರಣದ ಹಿನ್ನಲೆ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ ಆರೋಪದಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ವಿಜಯ್ ಲಕ್ಷ್ಮೀ ಜೋಶಿ, ಅಜಯ್ ಜೋಶಿ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನ ವಾಪಸ್ ನೀಡದೆ ಮೋಸ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಹಣ ವಾಪಾಸ್ ಕೇಳಿದಾಗ ಗೂಂಡಾಗಳಿಂದ ಬೆದರಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ್ ಫುಲ್ ಸಿಂಗ್ ಅವರ ಪತ್ನಿ ಸುನೀತಾ ಚವ್ಹಾಣ್ ಪೊಲೀಸರಿಗೆ ನೀಡಿದ್ದಂತ ದೂರಿನಲ್ಲಿ ತಿಳಿಸಿದ್ದರು.
ಈ ಕೇಸ್ ದಾಖಲಾಗುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ನಾಪತ್ತೆಯಾಗಿದ್ದರು. ಇಂತಹ ಅವರನ್ನು ಇಂದು ಬಸವೇಶ್ವರನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು: ಸಚಿವ ಮಧು ಬಂಗಾರಪ್ಪ
BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ ಕಛೇರಿಯ ಮೇಲೆ ಬಾಂಬ್ ದಾಳಿ : ಸ್ಥಳದಲ್ಲೇ ಶಂಕಿತ ಅರೆಸ್ಟ್!