ಮಂಡ್ಯ: ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಭಿಪ್ರಾಯಪಟ್ಟರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಹೇಳಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ ಎಂದರು.
ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಭ ಮಾಡದೆ ಸಂಬಂಧ ಪಟ್ಟ ಇಲಾಖೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯ ಸಂಬಂಧ ಪಟ್ಟ ವಾರಸುದಾರರ ದಾಖಲೆಗಳನ್ನು ಪಡೆದು ಕೂಡಲೇ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಎಲ್ಲಾ ತಹಶೀಲ್ದಾರ್ ಗಳು ತಮ್ಮ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣದ ಕುರಿತು ಜಾಗೃತಿ ಸಮಿತಿ ಸಭೆ ಹಾಗೂ ಕುಂದು ಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಸಮರ್ಪಕವಾಗಿ ಕುಂದು ಕೊರತೆಗಳ ಸಭೆ ಆಯೋಜನೆ ಮಾಡುವುದು ಸಂಬಂಧ ಪಟ್ಟ ಇಲಾಖೆಯ ಸಹಾಯಕ ನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.
ಜಾತಿ ಕುರಿತ ಇನ್ನೂ ಸಹ ಇರುವ ಅಸಹನೆಯನ್ನು ನಾಗರೀಕ ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರಿಕ ಪ್ರಜ್ಞಾವಂತರು ಅದನ್ನು ಖಂಡಿಸುವ ಕೆಲಸ ಮಾಡಬೇಕಿದೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸಾಧ್ಯವಾದಷ್ಟು ಬೇಗ ಮುಗಿಸಿ ಎಂದು ತಿಳಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ನೌಕರಿ ನೀಡುವ ಪ್ರಕ್ರಿಯೆ ಹಾಗೂ ಪಿಂಚಣಿ ನೀಡುವ ಸೌಲಭ್ಯಗಳನ್ನು ಶ್ರೀಘ್ರವಾಗಿ ನಡೆಯಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಜಗೃತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 ಗ್ರಾಮ ಆಡಳಿತಾಧಿಕಾರಿ’ ವರ್ಗಾವಣೆ | VA Transfer
BREAKING: ರಾಜ್ಯದ ‘1,275 ಸ್ಥಳ’ಗಳನ್ನು ‘ಪ್ರವಾಸಿ ತಾಣ’ಗಳಾಗಿ ಸರ್ಕಾರ ಘೋಷಣೆ