ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM Yogi Adityanath)ಅವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿ ವಾಟ್ಸ್ಆ್ಯಪ್ನಲ್ಲಿ ಈ ಕೊಲೆ ಬೆದರಿಕೆ ಸಂದೇಶ ಬಂದಿತ್ತು ಎನ್ನಲಾಗಿದೆ.
ಪೊಲೀಸ್ ಕಂಟ್ರೋಲ್ ರೂಂನ ಸಹಾಯವಾಣಿ ವಾಟ್ಸ್ಆ್ಯಪ್ ನಂಬರ್ಗೆ ಆಗಸ್ಟ್ 2 ರಂದು ಬಂದ ಈ ಸಂದೇಶದಲ್ಲಿ 3 ದಿನಗಳಲ್ಲಿ ಯುಪಿ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದೆ.
ಇದೀಗ ಸಹಾಯವಾಣಿಯ ಆಪರೇಷನ್ ಕಮಾಂಡರ್ ಪೊಲೀಸರಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂದೇಶ ಕಳುಹಿಸಿದವರನ್ನು ಪತ್ತೆಗಾಗಿ ಶೋಧ ನಡೆಯುತ್ತಿದೆ.
ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIGG NEWS : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
BIGG NEWS: ಮನೆಯಲ್ಲೇ ಕುಳಿತು ಈ ರೀತಿ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಲಿಂಕ್ ಮಾಡಬಹುದು!
Bigg News : ಆ.13 ರಿಂದ 15 ರವರೆಗೆ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ