ಪ್ರಯಾಗ್ರಾಜ್(ಉತ್ತರ ಪ್ರದೇಶ): ಡೆಂಗ್ಯೂ ರೋಗಿಯೊಬ್ಬರಿಗೆ ರಕ್ತದ ಪ್ಲಾಸ್ಮಾ ಅಥವಾ ಪ್ಲೇಟ್ಲೆಟ್(Platelets) ಬದಲಿಗೆ ಮೋಸಂಬಿ ಹಣ್ಣಿನ ಜ್ಯೂಸ್ ಡ್ರಿಪ್ ಅನ್ನು ದೇಹಕ್ಕೆ ವರ್ಗಾಯಿಸಲಾಗಿದ್ದು, ರೋಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ನಂತ್ರ ಆಸ್ಪತ್ರೆಯನ್ನು ಗುರುವಾರ ಸೀಲ್ ಮಾಡಲಾಗಿದೆ.
32 ವರ್ಷದ ಪ್ರದೀಪ್ ಪಾಂಡೆಯನ್ನು ಅಕ್ಟೋಬರ್ 17 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ, ಆತ ಬುಧವಾರ ಪ್ರಯಾಗರಾಜ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರು. ಆತನ ಸಾವಿಗೆ ಆಸ್ಪತ್ರೆಯವರೇ ಕಾರಣ ಎಂದು ಕುಟುಂಬ ಆರೋಪಿಸಿದ ನಂತರ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ವೇಳೆ ಅಕ್ರಮ ಬಯಲಾಗಿದೆ.
ರಕ್ತದ ಪ್ಯಾಕ್ನಲ್ಲಿ ಮೋಸಂಬಿ ರಸವನ್ನು ತೋರಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವೈರಲ್ ಆಗುತ್ತಿದೆ. ಘಟನೆಯು ಆಕ್ರೋಶವನ್ನು ಉಂಟುಮಾಡಿದ್ದು, ಘಟನೆ ನಡೆದ ಗ್ಲೋಬಲ್ ಆಸ್ಪತ್ರೆ ಮತ್ತು ಟ್ರಾಮಾ ಸೆಂಟರ್ ಅನ್ನು ಮುಚ್ಚಬೇಕು ಎಂದು ಮುಖ್ಯ ವೈದ್ಯಾಧಿಕಾರಿ ಆದೇಶಿಸಿದರು.
प्रयागराज में मानवता शर्मसार हो गयी।
एक परिवार ने आरोप लगाया है कि झलवा स्थित ग्लोबल हॉस्पिटल ने डेंगू के मरीज प्रदीप पांडेय को प्लेटलेट्स की जगह मोसम्मी का जूस चढ़ा दिया।
मरीज की मौत हो गयी है।
इस प्रकरण की जाँच कर त्वरित कार्यवाही करें। @prayagraj_pol @igrangealld pic.twitter.com/nOcnF3JcgP
— Vedank Singh (@VedankSingh) October 19, 2022
ಆಸ್ಪತ್ರೆಯ ಎಲ್ಲ ರೋಗಿಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲು ಜಿಲ್ಲಾಡಳಿತ ತ್ರಿಸದಸ್ಯ ಸಮಿತಿಗೆ ಆದೇಶಿಸಿದೆ. ಘಟನೆಯ ಪ್ರಾಥಮಿಕ ತನಿಖೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಉಪ ಮುಖ್ಯಮಂತ್ರಿ ಪಾಠಕ್, ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗೆ ಪ್ಲೇಟ್ಲೆಟ್ಗಳ ಬದಲಿಗೆ ಸಿಹಿ ನಿಂಬೆ ರಸವನ್ನು ತುಂಬಿಸಿದ ವೈರಲ್ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು, ನನ್ನ ನಿರ್ದೇಶನದ ಮೇರೆಗೆ ಆಸ್ಪತ್ರೆಗೆ ಸೀಲ್ ಮಾಡಲಾಗಿದೆ ಮತ್ತು ಪ್ಲೇಟ್ಲೆಟ್ ಪ್ಯಾಕೆಟ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ” ತಪ್ಪಿತಸ್ಥರೆಂದು ಕಂಡುಬಂದರೆ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
BIG NEWS: 8 ವರ್ಷ ವಯಸ್ಸಿನವರೆಗಿನ ಮಕ್ಕಳಿಗೆ ಸರ್ಕಾರಿ & ಖಾಸಗಿ ಶಾಲೆಗಳಲ್ಲಿ ಮಾತೃಭಾಷೆಯಲ್ಲೇ ಕಲಿಸಿ: NCF