ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಬಗ್ಗೆ ಮಾಧ್ಯಮಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಗಲಾಟೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಜಿಲ್ಲೆಯಲ್ಲೂ ಯುಪಿ ಮಾದರಿಯಲ್ಲಿ ಕಾರ್ಯಚರಣೆ ನಡೆಸಬೇಕು ಎಂದು ಪಣ ತೊಟ್ಟಿದ್ದಾರೆ.
ದೇಶದ್ರೋಹಿ ಕೃತ್ಯ ಎಸಗುವವರಿಗೆ ಯುಪಿ ಮಾದರಿ ಕ್ರಮ ಕೈಗೊಳ್ಳಬೇಕು. ಈ ರೀತಿ ಕ್ರಮದಿಂದ ಮಾತ್ರ ಕಿಡಿಗೇಡಿಗಳನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಶಾಸನ ರೇಣುಕಾಚಾರ್ಯ ಕಿಡಿಕಾರಿದ್ದಾರೆ.