ಉತ್ತರ ಪ್ರದೇಶ : ಊಟ ಮಾಡುತ್ತಿದ್ದ ವೇಳೆ ಪದೇ ಪದೇ ಮಾವಿನ ಹಣ್ಣು ಕೇಳಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ 5 ವರ್ಷದ ಸೊಸೆಯನ್ನು ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಖೇಡಾ ಕುರ್ತಾನ್ ಗ್ರಾಮದಲ್ಲಿ ನಡೆದಿದೆ.
ಮೊದಲು ರಾಡ್ನಿಂದ ಬಾಲಕಿಯ ತಲೆಗೆ ಹೊಡೆದು, ನಂತರ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದದ್ದಾನೆ. ಬಳಿಕ ಆಕೆಯ ದೇಹವನ್ನು ಗೋಣಿಚೀಲದಲ್ಲಿ ತುಂಬಿ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೂಲಿ ಕಾರ್ಮಿಕನ ಮಗಳು ಖೈರು ನಿಶಾ(5) ಕೊಲೆಯಾದ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಮಧ್ಯಾಹ್ನ ನಾಪತ್ತೆಯಾಗಿದ್ದರು ಎನ್ನಲಾಗುತ್ತಿದೆ.
ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತನಿಖೆಯ ವೇಳೆ ಪೊಲೀಸರು ಆರೋಪಿಯ ಮನೆಯಲ್ಲಿ ಬಾಲಕಿಯ ಶವವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಗುರುವಾರ ರಾತ್ರಿ ಬಂಧಿಸಿ ಶುಕ್ರವಾರ ಜೈಲಿಗೆ ಕಳುಹಿಸಲಾಗಿದೆ.
ಘಟನೆ ಕುರಿತಂತೆ ಶಾಮ್ಲಿ ಎಎಸ್ಪಿ ಒಪಿ ಸಿಂಗ್ ಮಾತನಾಡಿದ್ದು, ಪೊಲೀಸರು ಗ್ರಾಮದ ಸಮೀಪದ ಅರಣ್ಯ ಪ್ರದೇಶದಿಂದ ಆರೋಪಿ ಉಮರ್ದೀನ್ನನ್ನು ಬಂಧಿಸಿದ್ದಾರೆ.ಆತನಿಂದ ಆಯುಧಗಳು, ಚಾಕು ಮತ್ತು ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಂಡಿದ್ದಾರೆ.
BIGG NEWS : ಬೆಳೆಗಾವಿಯಲ್ಲಿ ಘೋರ ದುರಂತ : ಮದುವೆ ಒಪ್ಪದ ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ!