ಸಂಭಾಲ್( ಉತ್ತರ ಪ್ರದೇಶ) : ಹಿಂದೂ ದೇವತೆಗಳ ಚಿತ್ರವಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಂಭಾಲ್ನಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ತಾಲಿಬ್ ಹುಸೇನ್ ಎಂದು ಗುರುತಿಸಲಾಗಿದೆ. ಈತ ತನ್ನ ಅಂಗಡಿಯಲ್ಲಿ ಕೋಳಿ ಮಾಂಸವನ್ನು ಹಿಂದೂ ದೇವರುಗಳ ಚಿತ್ರವಿರುವ ಕಾಗದದ ಮೇಲೆ ಮಾರಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ತಾಲಿಬ್ ಹುಸೇನ್ನನ್ನು ಬಂಧಿಸಲು ಅವರ ಅಂಗಡಿಗೆ ತೆರಳಿದ್ದ ವೇಳೆ ಆತ ಪೊಲೀಸ್ ತಂಡದ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದನು. ಈ ಸಂಬಂಧ ತಾಲಿಬ್ ಹುಸೇನ್ ವಿರುದ್ಧ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.