ಬಲರಾಂಪುರ(ಉತ್ತರಪ್ರದೇಶ): ಹಾವು ಕಡಿತದಿಂದ ಸಾವನ್ನಪ್ಪಿದ್ದ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಭವಾನಿಪುರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಹಾವು ಕಚ್ಚಿ ಅರವಿಂದ್ ಮಿಶ್ರಾ (38) ಮೃತಪಟ್ಟಿದ್ದರು. ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬುಧವಾರ ಭವಾನಿಪುರ ಗ್ರಾಮಕ್ಕೆ ಗೋವಿಂದ್ ಮಿಶ್ರಾ (22) ಆಗಮಿಸಿದ್ದರೆ. ಅಂತ್ಯಕ್ರಿಯೆಯನ್ನು ಮುಗಿಸಿ ಅರವಿಂದ್ ಮಿಶ್ರಾ ರಾತ್ರಿ ನಿದ್ದೆ ಮಾಡುತ್ತಿದ್ದ ವೇಳೆ ಹಾವು ಕಚ್ಚಿದೆ. ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಇದೇ ವೇಳೆ ಅದೇ ಮನೆಯಲ್ಲಿದ್ದ ಕುಟುಂಬದ ಸಂಬಂಧಿಗಳಲ್ಲಿ ಒಬ್ಬರಾದ ಚಂದ್ರಶೇಖರ್ ಪಾಂಡೆ (22) ಅವರಿಗೂ ಹಾವು ಕಚ್ಚಿದ್ದೆ, ಅವರನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗೋವಿಂದ ಮಿಶ್ರಾ ಮತ್ತು ಚಂದ್ರಶೇಖರ್ ಪಾಂಡೆ ಇಬ್ಬರೂ ಅರವಿಂದ ಮಿಶ್ರಾ ಅವರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಲುಧಿಯಾನದಿಂದ ಗ್ರಾಮಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಹಿರಿಯ ವೈದ್ಯಕೀಯ ಮತ್ತು ಆಡಳಿತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಸ್ಥಳೀಯ ಶಾಸಕ ಕೈಲಾಶ್ ನಾಥ್ ಶುಕ್ಲಾ ಅವರು ದುಃಖತಪ್ತ ಕುಟುಂಬವನ್ನು ಭೇಟಿಯಾಗಿ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಶುಕ್ಲಾ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.