ಬರೇಲಿ (ಯುಪಿ): ಮೂವರು ವ್ಯಕ್ತಿಗಳು ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಯುಪಿಯ ಬರೇಲಿಯಲ್ಲಿ ನಡೆದಿದೆ. ಅತ್ಯಾಚಾರದಿಂದಾಗಿ ಗರ್ಭಿಣಿ ಮಹಿಳೆಗೆ ಗರ್ಭಪಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸೆಪ್ಟೆಂಬರ್ 13 ರಂದು ಈ ಘಟನೆ ನಡೆದಿದೆ. ಮಹಿಳೆಯ ಪತಿ ಸೆಪ್ಟೆಂಬರ್ 16 ರಂದು ಬರೇಲಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ʻನನ್ನ ಪತ್ನಿ 3 ತಿಂಗಳ ಗರ್ಭಿಣಿ. ಆಕೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೂವರು ಪುರುಷರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದರಿಂದಾಗಿ ಗರ್ಭಪಾತವಾಗಿದೆʼ ಎಂದು ಸಂತ್ರಸ್ತೆಯ ಪತಿ ದೂರು ದಾಖಲಿಸಿದ್ದಾರೆ.
ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮಂಗಳವಾರ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
BIG NEWS: ʻಮಾನಸಿಕ ಆರೋಗ್ಯಕ್ಕೆ ಆದ್ಯತೆʼ: ತನ್ನ ಉದ್ಯೋಗಿಗಳಿಗೆ 11 ದಿನ ವಿರಾಮ ನೀಡಿದ ʻMeeshoʼ!