ಮುಂಬೈ ; ಮುಂಬೈ ಕರಾವಳಿಯಲ್ಲಿ ಬುಧವಾರ ಮಧ್ಯಾಹ್ನ ದೋಣಿ ಮಗುಚಿ ಕನಿಷ್ಠ ಹದಿಮೂರು ಜನರು ಸಾವನ್ನಪ್ಪಿದ್ದಾರೆ. 101 ಜನರನ್ನು ರಕ್ಷಿಸಲಾಗಿದ್ದು, ಕಾಣೆಯಾದ ಕನಿಷ್ಠ ಐದು ಜನರಿಗಾಗಿ ಶೋಧ ನಡೆಯುತ್ತಿದೆ.
ಮೃತರಲ್ಲಿ 10 ನಾಗರಿಕರು ಮತ್ತು ಮೂವರು ನೌಕಾಪಡೆಯ ಸಿಬ್ಬಂದಿ ಸೇರಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ನೀಲಕಮಲ್ ಎಂಬ ಹೆಸರಿನ ದೋಣಿ ಗೇಟ್ ವೇ ಆಫ್ ಇಂಡಿಯಾದಿಂದ ಜನಪ್ರಿಯ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯ ಸ್ಪೀಡ್ ಬೋಟ್ ಸಂಜೆ ೪ ಗಂಟೆ ಸುಮಾರಿಗೆ ನೀಲಕಮಲ್ ಗೆ ಡಿಕ್ಕಿ ಹೊಡೆದಿದೆ.
ಭಾರತೀಯ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, 11 ನೌಕಾಪಡೆಯ ದೋಣಿಗಳು ಮತ್ತು ಮೆರೈನ್ ಪೊಲೀಸರ ಮೂರು ದೋಣಿಗಳು ಮತ್ತು ಕೋಸ್ಟ್ ಗಾರ್ಡ್ನ ಒಂದು ದೋಣಿಯನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನಾಲ್ಕು ಹೆಲಿಕಾಪ್ಟರ್ ಗಳು ಸಹ ಭಾಗಿಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
BIG NEWS: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟಕ್ಕೆ ವಿರೋಧ; ಕೋಳಿ, ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ