ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

BIGG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು!

ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಲಿಂಗಸೂಗುರು ತಾಲೂಕಿನ ಹಟ್ಟಿ ಪಟ್ಟಣದವರು ಎಂದು ಗುರುತಿಸಲಾಗಿದೆ. ತೆಲಂಗಾಣದ ಕೊಡಂಗಲ್ ಜವಳ ಕಾರ್ಯಕ್ಕೆ ಹೋಗಿದ್ದರು. ಈ ವೇಳೆ ವಾಪಸ್ ಬರುವಾಗ ಗುರುಮಠಕಲ್ ಬಳಿ ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಓರ್ವ ಬಾಲಕನ ಸ್ಥೀತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 : ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ದಾಖಲೆ ಬರೆದ ಸುಧೀರ್, ಭಾರತಕ್ಕೆ 6ನೇ ಚಿನ್ನ

Share.
Exit mobile version