ಥಾಣೆ : ಮುಂಬೈ ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ಖಾನೆಯಲ್ಲಿ ಮೂರು ಸ್ಫೋಟಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕನಿಷ್ಠ ಎಂಟು ಜನರನ್ನ ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
ಮೈಸೂರಲ್ಲಿ ಗ್ಯಾಸ್ ಲೀಕ್ ಆಗಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 3 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
BREAKING : ಛತ್ತೀಸ್‌ಗಢದಲ್ಲಿ ಭದ್ರತಾ ಪಡೆ-ನಕ್ಸಲರ ನಡುವೆ ಎನ್‌ಕೌಂಟರ್ : ಏಳು ಮಾವೋವಾದಿಗಳು ಹತ