ನವದೆಹಲಿ: ಬಂಗಾಳದ ಸಿಲಿಗುರುದಲ್ಲಿ ಸೋಮವಾರ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ರೈಲು ಕೋಲ್ಕತ್ತಾದ ಸೀಲ್ಡಾ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿಲಿಗುರಿಯ ರಂಗಪಾಣಿ ಪ್ರದೇಶದಲ್ಲಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 

ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸೀಲ್ಡಾಗೆ ಪ್ರಯಾಣವನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ವೈದ್ಯರು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.

 

Share.
Exit mobile version