ವಯನಾಡ್ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 123 ಕ್ಕೆ ಏರಿಕೆಯಾಗಿದ್ದು, 123 ಶವಗಳನ್ನ ವಶಪಡಿಸಿಕೊಳ್ಳಲಾಗಿದೆ ಮತ್ತು 116 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜುಲೈ 30ರ ಮುಂಜಾನೆ ವಯನಾಡಿನ ಮೆಪ್ಪಾಡಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸರಣಿ ಭೂಕುಸಿತ ಸಂಭವಿಸಿದ್ದು, ವ್ಯಾಪಕ ವಿನಾಶಕ್ಕೆ ಕಾರಣವಾಗಿದೆ. ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, 123 ಶವಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಕೇರಳ ಮುಖ್ಯ ಕಾರ್ಯದರ್ಶಿ ವಿ. ವೇಣು ಖಚಿತಪಡಿಸಿದ್ದಾರೆ. ಇದಲ್ಲದೆ, ಮಲಪ್ಪುರಂನ ಚಾಲಿಯಾರ್ ನದಿಯಿಂದ 16 ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಜುಲೈ 30 ರ ಮಂಗಳವಾರ ಮತ್ತು ಜುಲೈ 31ರ ಬುಧವಾರ ಎರಡು ದಿನಗಳ ರಾಜ್ಯವ್ಯಾಪಿ ಶೋಕಾಚರಣೆಯನ್ನ ಘೋಷಿಸಿದ್ದಾರೆ. ಇತ್ತೀಚಿನ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 123 ಕ್ಕೆ ಏರಿದೆ ಎಂದು ಕೇರಳ ಕಂದಾಯ ಸಚಿವರ ಕಚೇರಿ ವರದಿ ಮಾಡಿದೆ, 116 ಮಂದಿ ಗಾಯಗಳಾಗಿದ್ದಾರೆ ಎಂದು ದೃಢಪಟ್ಟಿದೆ.