ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.
ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಲುಗನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.