ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ) ದಲ್ಲಿ ಕಾಲ್ತುಳಿತದಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಮೃತ ದೇಹಗಳನ್ನ ಹತ್ರಾಸ್ ಮತ್ತು ನೆರೆಯ ಇಟಾ ಜಿಲ್ಲೆಯ ಆಸ್ಪತ್ರೆಗಳಿಗೆ ಕೊಂಡಯ್ಯಲಾಗಿದೆ. ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ತಮ್ಮ ಜಿಲ್ಲೆಯಲ್ಲಿ ಸುಮಾರು 60 ಜನರ ಸಾವುಗಳನ್ನ ದೃಢಪಡಿಸಿದರೆ, ಇಟಾದ ಅಧಿಕಾರಿಗಳು ಅಲ್ಲಿನ ಆಸ್ಪತ್ರೆಗಳಿಂದ ಇನ್ನೂ 27 ಸಾವುಗಳು ವರದಿಯಾಗಿವೆ ಎಂದು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್, ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿರುವ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದರು.
ಅಂದ್ಹಾಗೆ, ಸಕರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗಾಗಿ ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್ ಸಮಿತಿ ಸತ್ಸಂಗವನ್ನ ಆಯೋಜಿಸಿತ್ತು.
BREAKING : ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ, ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
‘ಚಾರಣಿಗ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಚಾರಣಪಥಗಳ ಆನ್ ಲೈನ್ ಟಿಕೆಟ್’ಗೆ ಆರಂಭ
ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತಕ್ಕೆ ಸಂಸತ್ತಿನಲ್ಲಿ ‘ಪ್ರಧಾನಿ ಮೋದಿ’ ಸಂತಾಪ