ರಾಯಚೂರು: ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಕಪಗಲ್ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನ ಸಮರ್ಥ (7) ಹಾಗೂ ಶ್ರೀಕಾಂತ್ (12) ಎಂದು ಗುರುರಿಸಲಾಗಿದೆ. ಇನ್ನು ಜಿಲ್ಲಾಧಿಕಾರಿ ನಿತಿಶ್.ಕೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲಾ 5 ಲಕ್ಷ ಪರಿಹಾರ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಜಿಲ್ಲಾಧಿಕಾರಿ ನಿತಿಶ್.ಕೆ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲಾ 5 ಲಕ್ಷ ಪರಿಹಾರ ಹಾಗೂ ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. 5/6
— Ravi Boseraju (@raviboseraju) September 5, 2024
ವರದಿಗಳ ಪ್ರಕಾರ, ಅಪಘಾತದಲ್ಲಿ ಇತರ 32 ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ 18 ಮಕ್ಕಳನ್ನ ರಿಮ್ಸ್ ಆಸ್ಪತ್ರಗೆ ಹಾಗೂ 14 ವಿದ್ಯಾರ್ಥಿಗಳು ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಪ್ರಕಾರ, ಅಪಘಾತ ಸಂಭವಿಸಿದಾಗ ಬಸ್ ಲೊಯೊಲಾ ಶಾಲೆಯ ವಿದ್ಯಾರ್ಥಿಗಳನ್ನ ಕರೆದೊಯ್ಯುತ್ತಿತ್ತು.
ಮೂವರು ಮಕ್ಕಳ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಾಸಕ ಯತ್ನಾಳ್ ಗೆ ಮತ್ತೆ ಸಂಕಷ್ಟ : ಸಕ್ಕರೆ ಕಾರ್ಖಾನೆ ತೆರೆಯದಂತೆ ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ ‘PCB’!
/
ನಾನು ಮೊದಲ ಬಾರಿ ಶಾಸಕನಾದಾಗ ‘ಶಿಕ್ಷಣ’ ಇಲ್ಲದೆ ರಾಜಕಾರಣಿ ಆಗಬಾರದು ಎಂಬ ವಿಷಯ ಗೊತ್ತಾಯ್ತು : ಡಿಕೆ ಶಿವಕುಮಾರ್