ಬೆಂಗಳೂರು : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮಾಂಕ (1) ರಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗಿ, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 147 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿ ಆದೇಶಿಸಲಾಗಿದೆ. ಸದರಿ 147 ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಗಳ ಪೈಕಿ CSR ಬೆಂಬಲಿತ ಒಟ್ಟು 65 ಸರ್ಕಾರಿ ಶಾಲೆಗಳನ್ನು, ಆಯವ್ಯಯ ಘೋಷಣೆಯಂತೆ ರಾಜ್ಯ ಅನುದಾನದಡಿ 76 (Non-CSR) ಸರ್ಕಾರಿ ಶಾಲೆಗಳನ್ನು ಹಾಗೂ ಕೇಂದ್ರ ಶಿಕ್ಷಣ ಮಂತ್ರಾಲಯ, ನವದೆಹಲಿ, ಇಲ್ಲಿನ PAB ಯಲ್ಲಿನ ಅನುಮೋದನೆಯಂತೆ 6 ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಆದೇಶಿಸಲಾಗಿದೆ
ಕ್ರಮಾಂಕ (2) ರಲ್ಲಿ ಮಾನ್ಯ ಇಲಾಖಾ ಸಚಿವರ ಸೂಚನೆಯಂತೆ ರಾಜ್ಯ ಅನುದಾನದಡಿ ಈ ಕೆಳಕಂಡ ಒಟ್ಟು 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಸರ್ಕಾರವು ತೀರ್ಮಾನಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಅನುದಾನದಡಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಈ ಕೆಳಕಂಡಂತೆ ಒಟ್ಟು 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಚಾಲ್ತಿಯಲ್ಲಿರುವ ಉನ್ನತೀಕರಣದ ನಿಯಮಗಳಿಗೊಳಪಟ್ಟು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.