ಬೆಂಗಳೂರು : ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕೆಲವು ಯೂಟ್ಯೂಬರ್ಸ್ ವಿರುದ್ಧ ಸ್ಯಾಂಡಲ್ ವುಡ್ ನಟಿ ಸಪ್ತಮಿ ಗೌಡ ಇದೀಗ ಅಕ್ರೋಶ ಹೊರಹಾಕಿದ್ದಾರೆ. ಕೆಲ ಯೂಟ್ಯೂಬರ್ಸ್ ಸಪ್ತಮಿ ಗೌಡಗೆ ಮುಜುಗರ ತಂದಿಟ್ಟಿದ್ದು ಅಸಭ್ಯ ರೀತಿಯಲ್ಲಿ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಕಿಡಿ ಕಾರಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ಚಿತ್ರರಂಗದಲ್ಲಿರುವ ಮಹಿಳೆಯರಾಗಿ,ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತು ಫೋಟೋಗಳನ್ನು ಅಸಭ್ಯ ಕೋನಗಳಿಂದಚಿತ್ರೀಕರಿಸಿ, ನಮ್ಮ ಕಲೆಯಿಗಿಂತೆ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ.
ಇಂತಹವರ್ತನೆ,ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ, ಅವಮಾನಕಾರಿ ಮತ್ತುಸ್ತೆಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ.ನಾವು ಇಲ್ಲಿನಮ್ಮ ಸೆನೆಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮಗೌರವಕ್ಕೆ ಸ್ಪಷ್ಟಧಕ್ಕೆ.ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ.
ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈಗ ಗಡಿ ರೇಖೆಯನ್ನು ಸ್ವಷ್ಟವಾಗಿ ಎಳೆದು. ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವನಮ್ಮಧ್ವನಿ ಮುಂದುವರೆಯುತ್ತದೆ.








