Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್ ಯುದ್ಧದ ಎಫೆಕ್ಟ್: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಕೆ | Petrol Diesel price hike

​ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣ: 10 ಆರೋಪಿಗಳ ವಿರುದ್ಧ 7,500 ಪುಟಗಳ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದ NIA!

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ದರ 3 ರೂ. ಏರಿಕೆ | Petrol diesel price hike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭದ್ರಾ ಮೇಲ್ದಂಡೆ ಯೋಜನೆ ಹಣವೇ ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಭದ್ರಾ ಮೇಲ್ದಂಡೆ ಯೋಜನೆ ಹಣವೇ ಬರಲಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸೋಮಣ್ಣ ಅವರು ಜಲಶಕ್ತಿ ಸಚಿವರಾಗಿರುವುದರಿಂದ ತಾರತಮ್ಯವಾಗಲಿದೆ ಎಂಬ ತಮಿಳುನಾಡು ಕಾಂಗ್ರೆಸ್ ಪ್ರಧಾನಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, “ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ನಾನು ಸಚಿವನಾಗಿದ್ದಾಗ ಪೈಲೆಟ್ ಯೋಜನೆಗಳನ್ನು ನನ್ನ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಲುಬುರ್ಗಿಯಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಿಸಿದರು. ಇದು ಸಹಜ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸೋಮಣ್ಣ ಅವರು ಈಗಷ್ಟೇ ಸಚಿವರಾಗಿ ಕಣ್ಣು ಬಿಡುತ್ತಿದ್ದಾರೆ. ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಯಾವುದೇ ಕೆಲಸವಾದರೂ ಕಾನೂನು ಬದ್ಧವಾಗಿ ಅವಕಾಶ ಇದ್ದರೆ ಅದನ್ನು ಮಾಡುತ್ತಾರೆ. ಆದರೆ ಕಾವೇರಿ ವಿಚಾರ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದೆ. ತಮಿಳುನಾಡಿನವರು ತಮ್ಮ ಅಭಿಪ್ರಾಯವನ್ನು ಬರೆದಿದ್ದಾರೆ. ಪ್ರಧಾನಮಂತ್ರಿಗಳು ಅಂತಿಮ ತೀರ್ಮಾನ ಮಾಡುತ್ತಾರೆ. ನಾವು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ” ಎಂದರು.

ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದಾಗ, “ಬಿಬಿಎಂಪಿ ಚುನಾವಣೆ ಮಾಡಲು ಮೀಸಲಾತಿ ಸೇರಿದಂತೆ ಇತರೆ ಪ್ರಕ್ರಿಯೆ ಪೂರ್ಣಗೊಳಿಸಲು ತಯಾರು ಮಾಡಿದ್ದೇವೆ. ಆದಷ್ಟು ಬೇಗ ಚುನಾವಣೆ ಮಾಡುತ್ತೇವೆ” ಎಂದರು.

ಬಿಬಿಎಂಪಿ ವಿಭಜನೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈ ಹಿಂದೆಯೇ ಪ್ರಸ್ತಾವನೆ ಇತ್ತು. ಆ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಏನೇ ಇದ್ದರೂ ಆದಷ್ಟು ಬೇಗ ಚುನಾವಣೆ ಮಾಡಲಾಗುವುದು. ನಾವು ಮಾಡದಿದ್ದರೆ ಕೋರ್ಟ್ ಬಿಡುವುದಿಲ್ಲ” ಎಂದರು.

ಕೇಂದ್ರದ ನೂತನ ಸಚಿವರಿಗೆ ಶುಭ ಕೋರುತ್ತೀರಾ ಎಂದು ಕೇಳಿದಾಗ, “ಮಾಧ್ಯಮಗಳ ಮೂಲಕವೇ ನಾನು ಕೇಂದ್ರದ ನೂತನ ಸಚಿವರಿಗೆ ಶುಭ ಕೋರುತ್ತೇನೆ. ಎಲ್ಲರೂ ರಾಜ್ಯಕ್ಕೆ ಶಕ್ತಿ ತುಂಬಲಿ, ದೇಶಕ್ಕೆ ಸೇವೆ ಮಾಡಲಿ” ಎಂದರು.

ಇನ್ನು ಘನತ್ಯಾಜ್ಯ ಸಂಗ್ರಹ ವಿಚಾರವಾಗಿ ರೂ.100 ಶುಲ್ಕದ ಬಗ್ಗೆ ಕೇಳಿದಾಗ, “ಘನತ್ಯಾಜ್ಯ ವಿಲೇವಾರಿ ನಿಯಮದಲ್ಲಿ ಹೆಚ್ಚಾಗಿದ್ದು, ಹೊಣೆಗಾರಿಕೆ ನಿಗದಿ ಮಾಡಬೇಕಿದೆ. ಬೆಂಗಳೂರಿನ ಹೊರವಲಯದ ನಾಲ್ಕು ಕಡೆಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಬೇಕಿದೆ. ಸದ್ಯದಲ್ಲೇ ಈ ವಿಚಾರವಾಗಿ ಟೆಂಡರ್ ಕರೆಯಲಾಗುವುದು. ಈ ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು” ಎಂದರು.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಬಂಧನದ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಮಾಹಿತಿ ಇಲ್ಲ. ಈ ವಿಚಾರವಾಗಿ ಗೃಹಸಚಿವರು ಮಾಹಿತಿ ನೀಡುತ್ತಾರೆ. ಕಾನೂನು ಎಲ್ಲರಿಗೂ ಒಂದೇ” ಎಂದು ತಿಳಿಸಿದರು.

ಕೇಂದ್ರ ಸಚಿವ ಸಂಪುಟದಲ್ಲಿ ಕನ್ನಡಿಗರಿಗೆ ನೀಡಿರುವ ಖಾತೆಗಳ ಬಗ್ಗೆ ಕೇಳಿದಾಗ, “ಅದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ. ಅವರಿಗೆ ಒಳ್ಳೆಯದಾಗಲಿ, ರಾಜ್ಯಕ್ಕೆ ಹೆಚ್ಚಿನ ಕೈಗಾರಿಕೆ ತಂದು, ಅನುದಾನ ತಂದು ಕರ್ನಾಟಕಕ್ಕೆ ಶಕ್ತಿ ತುಂಬಲಿ” ಎಂದರು.

BREAKING: ವಿಮಾನ ಅಪಘಾತದಲ್ಲಿ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಸೇರಿ 9 ಮಂದಿ ಸಾವು: ಅಧ್ಯಕ್ಷರ ಖಚಿತ ಮಾಹಿತಿ

ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!

Share. Facebook Twitter LinkedIn WhatsApp Email

Related Posts

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

1 Min Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

1 Min Read

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

1 Min Read
Recent News

BREAKING: ಇರಾನ್ ಯುದ್ಧದ ಎಫೆಕ್ಟ್: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಕೆ | Petrol Diesel price hike

​ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣ: 10 ಆರೋಪಿಗಳ ವಿರುದ್ಧ 7,500 ಪುಟಗಳ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದ NIA!

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ದರ 3 ರೂ. ಏರಿಕೆ | Petrol diesel price hike

‘ಈ ನಿಯಮ ತಕ್ಷಣ ಬದಲಾಗಲಿ’: ಪಂಜಾಬ್ ಕಿಂಗ್ಸ್‌ಗೆ ತಪ್ಪಿದ ರನ್; ಐಪಿಎಲ್ ನಿಯಮದ ವಿರುದ್ಧ ಅಶ್ವಿನ್ ಗರಂ!

State News
KARNATAKA

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆಯ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ…

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

ತಾಯಿಯನ್ನು ನೋಡಿಕೊಳ್ಳದ ಮಗಳಿಗೆ ಶಾಕ್ : ಆಸ್ತಿ ವಾಪಸ್ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ| Karnataka High Court

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.