ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯ ಲಂಚಾವತಾರದ ಚರ್ಚೆಗೆ ಬಿಜೆಪಿ ವಿಧಾನಸಭೆಯಲ್ಲಿ ಒತ್ತಾಯಿಸಿತು. ಇದಕ್ಕೆ ಸ್ಪೀಕರ್ ಅನುಮತಿ ನೀಡಲಿಲ್ಲ. ಹೀಗಾಗಿ ಸದನಲ್ಲಿ ಗದ್ದಲ, ಕೋಲಾಹಲಕ್ಕೂ ಕಾರಣವಾಯಿತು. ಈ ಹಿನ್ನಲೆಯಲ್ಲಿ ಸದನ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಲಾಗಿದೆ.
ವಿಧಾನಸಭೆಯಲ್ಲಿ ರಾಜ್ಯ ಅಬಕಾರಿ ಇಲಾಖೆಯ ಲಂಚ ಪ್ರಕರಮದ ಚರ್ಚೆಗೆ ಬಿಜೆಪಿ ಒತ್ತಾಯಿಸಿತು. ಈ ಲಂಚಾವತಾರದ ಹಿಂದೆ ಕೇರಳ, ಒಡಿಶಾಗೆ ಹಣ ಸಂದಾಯದ ಗುಮಾನಿಯನ್ನು ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್ ವ್ಯಕ್ತ ಪಡಿಸಿದರು. ಅದರ ಚರ್ಚೆಗೆ ಅವಕಾಶ ನೀಡುವಂತೆಯೂ ಒತ್ತಾಯಿಸಿದರು.
ಇದಷ್ಟೇ ಅಲ್ಲದೇ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರ ರಾಜೀನಾಮೆಗೂ ವಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ವಿಧಾನಸಭೆಯಲ್ಲಿ ಗದ್ದಲ, ಕೋಲಾಹಲ ಏರ್ಪಟ್ಟಿತು. ಈ ಹಿನ್ನಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ವಿಧಾನಸಭೆ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು.
BREAKING: KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ, ದಿಢೀರ್ ನಾಮಪತ್ರ ವಾಪಾಸ್
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








