UPSC-2020 ಇಂಜಿನಿಯರಿಂಗ್ ಸೇವೆ ಪರೀಕ್ಷೆ ವೇಳಾಪಟ್ಟಿ ಪ್ರಕಟ – Kannada News Now


India

UPSC-2020 ಇಂಜಿನಿಯರಿಂಗ್ ಸೇವೆ ಪರೀಕ್ಷೆ ವೇಳಾಪಟ್ಟಿ ಪ್ರಕಟ

ನವದೆಹಲಿ : ಯೂನಿಯನ್ ಪಬ್ಲಿಕ್ ಸರ್ವೀಸಸ್ ಕಮಿಷನ್ (UPSC) 2020 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗವು ಬಿಡುಗಡೆ ಮಾಡಿದೆ.

ಯುಪಿಎಸ್ ಸಿ ಇಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ ಅಕ್ಟೋಬರ್ 18 ರಂದು ಎರಡು ಶಿಫ್ಟ್ ಗಳಲ್ಲಿ ನಡೆಸಲಾಗುತ್ತದೆ. ಮೊದಲ ಶಿಫ್ಟ್ ಪರೀಕ್ಷೆಯನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಸಲಾಗುತ್ತದೆ. ಎರಡನೇ ಶಿಫ್ಟ್ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ಯುಪಿಎಸ್ ಸಿ ಸಿಎಸ್ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅ.18 ರವರೆಗೆ ಅವಕಾಶ ನೀಡಲಾಗಿದೆ.




error: Content is protected !!