ಬೆಂಗಳೂರು: ಜೂನ್.16, 2024ರಂದು ಬೆಂಗಳೂರಲ್ಲಿ ಯುಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆ-2024 ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಜೂನ್.16ರಂದು ಬೆಳಿಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16.06.2024 ಭಾನುವಾರ ದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2024) ನಡೆಯಲಿರುವುದರಿಂದ, ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07.00 ಗಂಟೆಗೆ ಬದಲಾಗಿ 06.00 ಗಂಟೆಗೆ ಪ್ರಾರಂಭವಾಗಲಿದೆ ಎಂದಿದೆ.
ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಕೋರಿದೆ.
ಜಮ್ಮು-ಕಾಶ್ಮೀರದಲ್ಲಿ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ: 50 ಆರೋಪಿಗಳ ಬಂಧನ | J&K bus terror attack