ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ : ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ … Continue reading ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ