ಅಮೆರಿಕ : ಇಲ್ಲಿನ ಜಾರ್ಜಿಯಾದ ಅಟ್ಲಾಂಟಾದಲ್ಲಿನ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಶನಿವಾರ ಶೂಟೌಟ್ ನಡೆದಿತ್ತು. ಘಟನೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಮೂವರು ಅಪ್ರಾಪ್ತರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ನಿನ್ನೆ ಸಂಜೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿಗಳ ಗುಂಪೊಂದು ಏಕಾಏಕಿ ಅಪಾರ್ಟ್ ಮೆಂಟಿಗೆ ನುಗ್ಗಿ, ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ರೀತಿಯ ವಿವಾದವು ಗುಂಡಿನ ದಾಳಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಎಪಿ ಉಲ್ಲೇಖಿಸಿದಂತೆ ಹ್ಯಾಂಪ್ಟನ್ ಹೇಳಿದ್ದಾರೆ.
BIGG NEWS : ನಾಳೆ `ಜೆಡಿಎಸ್’ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ