ವಾಷಿಂಗ್ಟನ್: ಗುರುವಾರ ನಿಧನರಾದ ಬ್ರಿಟನ್ ರಾಣಿ ಎಲಿಜಬೆತ್ II(Queen Elizabeth) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಶುಕ್ರವಾರ ಘೋಷಿಸಿದ್ದಾರೆ.
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬೈಡನ್, ʻನಾನು ಕೂಡ ಬ್ರಿಟನ್ ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆʼ ಎಂದಿದ್ದಾರೆ.
ಬ್ರಿಟನ್ ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 19 ರಂದು ಲಂಡನ್ನ ವೆಸ್ಟ್ಮಿನಿಸ್ಟರ್ ಅಬ್ಬೆಯಲ್ಲಿ ನಡೆಯಲಿದೆ ಎನ್ನಲಾಗಿದೆ.
ಮಾಧ್ಯಮಗಳ ಪ್ರಕಾರ, ಬೈಡನ್ ಅವರು ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಲಂಡನ್ಗೆ ಪ್ರಯಾಣಿಸಲು ಆರಂಭಿಕ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ.
`CET RANK’ : ಮತ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾದ ಕೆಇಎ