ಬೆಂಗಳೂರು: ಮುಂದಿನ ತಿಂಗಳು ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್ ಕಚೇರಿ ಆರಂಭಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಇದೇ ಜನವರಿಯಲ್ಲಿ ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್ ತನ್ನ ಕಚೇರಿಯನ್ನು ತೆರೆಯುತ್ತಿದೆ. ಇದು ಕರ್ನಾಟಕದ ಪ್ರಗತಿಗೆ ಬಹುದೊಡ್ಡ ಕೊಡುಗೆ ನೀಡಲಿದ್ದು ರಾಜ್ಯದ ಆರ್ಥಿಕತೆಗೆ ಇನ್ನಷ್ಟು ಶಕ್ತಿ ತುಂಬಲಿದೆ. ಇದು ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ರಾಜತಾಂತ್ರಿಕ, ತಾಂತ್ರಿಕ ಮತ್ತು ಆರ್ಥಿಕ ಸಹಯೋಗವನ್ನು ಉತ್ತೇಜಿಸುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿರುವ ಯುನೈಟೆಡ್ ಸ್ಟೇಟ್ಸ್ ರಾಯಭಾರಿ ಎರಿಕ್ ಗರ್ಸೆಟ್ಟಿ ಅವರಿಗೆ ಪತ್ರ ಬರೆದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಜನರಲ್ ಕಚೇರಿ ಆರಂಭಿಸುವಂತೆ ಕೋರಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ನವದೆಹಲಿಯಲ್ಲಿ ಯುನೈಟೆಡ್ ಸ್ಟೇಟ್ಸ್ ರಾಯಭಾರಿ ಎರಿಕ್ ಗರ್ಸೆಟ್ಟಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಪತ್ರವನ್ನು ನೀಡಿ ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಜನರಲ್ ಕಚೇರಿ ಆರಂಭಿಸುವಂತೆ ಕೋರಿದ್ದರು.
ಮುಂದಿನ ತಿಂಗಳು ಬೆಂಗಳೂರಿನಲ್ಲಿ ಅಮೇರಿಕ ಕಾನ್ಸುಲೇಟ್ ಕಚೇರಿ ತೆರೆಯುವ ನಿರೀಕ್ಷೆಯಿದೆ ಎಂದು ಅಮೇರಿಕಾ ರಾಯಭಾರಿಗಳು ತಿಳಿಸಿದ್ದಾರೆ ಎಂದು ಪ್ರಿಯಾಂಕ್ ಪೋಸ್ಟ್ ಮಾಡಿದ್ದಾರೆ.
Delivered as Promised!
Over the past few years, I’ve had the privilege of engaging in several discussions with the US Ambassador, HE. Eric Garcetti, and key representatives from the US Consulate, the Trade Mission, and the American Chamber of Commerce in India. At the heart of… pic.twitter.com/hNDlbrXiaB
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 20, 2024
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ