ಬೆಂಗೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.
ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪೆÇ್ರೀತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ತಿಳಿಸಿದರು.
ಸಿರಿಧಾನ್ಯಗಳನ್ನು ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾಗಿದೆ. ಸಿರಿಧಾನ್ಯಗಳು ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.
ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.
2004ರಲ್ಲಿ ಸಾವಯವ ಕೃಷಿ ನೀತಿ, 2014 ರಲ್ಲಿ ಪರಿಷ್ಕøತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಭನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.
ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಮಾತನಾಡಿ, ಆರೋಗ್ಯದ ಸ್ಥಿರತೆಗಾಗಿ ಸಿರಿಧಾನ್ಯವು ಉಪಯುಕ್ತವಾಗಿದೆ. ಸಿರಿಧಾನ್ಯ ಮಾರಾಟ ಮಾಡುವ 400 ಹೆಚ್ಚು ಮಳಿಗೆಗಳು ಬೆಂಗಳೂರು ನಗರದಲ್ಲಿ ಇವೆ. ರಾಜ್ಯದಲ್ಲಿ 35 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯಲಾಗುತ್ತಿದ್ದು, ಇದರ ಮೌಲ್ಯವರ್ಧನೆ , ಪ್ಯಾಕಿಂಗ್, ಬ್ರ್ಯಾಂಡಿಗ್ ಮತ್ತು ಮಾರಾಟಕ್ಕೆ ಆದ್ಯತೆ ನೀಡಲಾಗುತ್ತಿದೆ.
ಯುವಕರು ಆಹಾರ ಸಂಸ್ಕರಣ ಉದ್ದಿಮೆಯನ್ನು ಪ್ರಾರಂಭಿಸಲು ಅನುಕೂಲವಾಗುವಂತೆ 10 ಕೋಟಿ ಅನುದಾನವನ್ನು ನವೋದ್ಯಮ ಪ್ರೋತ್ಸಾಹ ಯೋಜನೆಯಡಿ ಕಾಯ್ದಿರಿಸಲಾಗಿದೆ. ರಾಜ್ಯದಲ್ಲಿ ರೈತರಿಗಾಗಿ ಹೈಟೆಕ್ ಸ್ಟಾಕ್ ಕೇಂದ್ರಗಳ ನಿರ್ಮಾಣವನ್ನು 50 ಕೋಟಿ ರೂಗಳ ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಈ ಮೇಳದಲ್ಲಿ ರಾಷ್ಟ್ರದಿಂದ 16 ರಾಜ್ಯಗಳು ಭಾಗವಹಿಸಿರುವುದು ಹೆಮ್ಮೆಯ ವಿಷಯವಾಗಿದೆ. ಮೇಳದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಥೆಗಳು, ಮಾರುಕಟ್ಟೆದಾರರು, ರಫ್ತುದಾರರು, ಚಿಲ್ಲರೆ ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರಗಳ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸೇರಿದಂತೆ 100 ಮಳಿಗೆಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ವಸ್ತು ಪ್ರದರ್ಶನ ಮಳಿಗೆಳು ಈ ಮೇಳದ ಪ್ರಮುಖ ಆಕರ್ಷಣೆಯಾಗಿದೆ.
ಸಿರಿಧಾನ್ಯಗಳು ಬಹು ಉಪಯೋಗಗಳನ್ನು (ಆಹಾರ, ಮೇವು. ಇಂಧನ) ಹೊಂದಿದ್ದು, ಸಾಮಾನ್ಯವಾಗಿ ಬರಗಾಲದ ಸಮಯದಲ್ಲಿ ಕೊನೆಯ ಬೆಳೆಯಾಗಿ ಸಹ ರೈತರಿಗೆ ಉತ್ತಮ ಅಪಾಯ ನಿರ್ವಹಣೆ ತಂತ್ರವಾಗಿದೆÉ. ಸಿರಿಧಾನ್ಯಗಳು ಪೌಷ್ಟಿಕಾಂಶ ಮತ್ತು ಆರೋಗ್ಯ ಸಮಸ್ಯೆಗಳನ್ನು (ಕಬ್ಬಿಣ, ಸತು, ಫೆÇೀಲಿಕ್ ಆಮ್ಲ, ಕ್ಯಾಲ್ಸಿಯಂ ಕೊರತೆ, ಮಧುಮೇಹ ಮತ್ತು ಇತರೆ) ನಿವಾರಿಸುವ ಶಕ್ತಿಯನ್ನು ಹೊಂದಿರುತ್ತವೆ. ಸಿರಿಧಾನ್ಯಗಳು ಕಡಿಮೆ ನೀರಿನ ಹೆಜ್ಜೆ ಗುರುತನ್ನು ಹೊಂದಿರುವುದರಿಂದ ಹಾಗೂ ಅತ್ಯಂತ ಶುಷ್ಕ ವಾತಾವರಣದಲ್ಲಿಯೂ ಬದುಕಬಲ್ಲವು ಮತ್ತು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲಿ ಶಕ್ತಿಯನ್ನು ಹೊಂದಿರುತ್ತವೆ ಎಂದು ತಿಳಿಸಿದರು.
ಗ್ರಾಹಕರಲ್ಲಿ ಅರಿವು ಮೂಡಿಸುವ ಉದ್ದೇಶದೊಂದಿಗೆ 2023ನೇ ಡಿಸೆಂಬರ್ 17ರಂದು ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕೃಷಿ ಇಲಾಖೆಯು ಕ್ರೈಸ್ಟ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ 2023ನೇ ಡಿಸೆಂಬರ್ 20ರಂದು ಸಿರಿಧಾನ್ಯಗಳ ಪಾಕಶಾಸ್ತ್ರ ವಿಚಾರ ಸಂಕಿರಣ “ಸಿರಿಧಾನ್ಯ ತಿಂತೀರಾ?” ಕಾರ್ಯಕ್ರಮವನ್ನು ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿತ್ತು. ದಿನ ನಿತ್ಯದ ಆಹಾರದಲ್ಲಿ ಸಿರಿಧಾನ್ಯಗಳ ಪುನರುತ್ಥಾನ ಪ್ಯಾನಲ್ ಚರ್ಚೆಯನ್ನು ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ 2023ನೇ ಡಿಸೆಂಬರ್20 ಮತ್ತು 21ರಂದು ಆಯೋಜಿಸಲಾಗಿತ್ತು. ಯುವ ಸಮೂಹ ಸಿರಿಧಾನ್ಯಗಳನ್ನು ಉಪಯೋಗಿಸಿ ಆರೋಗ್ಯಕರ ಆಹಾರ ಪದ್ಧತಿ ಅನುಸರಿಸಬೇಕಾಗಿರುವ ಕುರಿತು ಅರಿವು ಮೂಡಿಸಲಾಯಿತು.
2023ನೇ ಡಿಸೆಂಬರ್ 23ರಂದು ಜಿಲ್ಲಾಮಟ್ಟದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ, ರಾಜ್ಯ ಮಟ್ಟದಲ್ಲಿ ಸಿರಿಧಾನ್ಯ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಬಹುಮಾನಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.