ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಹೌದು, ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಾಲೆಗಳಲ್ಲಿ ‘ಮೊಬೈಲ್ ಲೆಸ್ ಡೇ’ ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತಿಸಿದೆ.
ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಬ್ಯಾಗ್ ಲೆಸ್ ಡೇ ಬಳಿಕ ‘ಮೊಬೈಲ್ ಲೆಸ್ ಡೇ’ ಪ್ರಯತ್ನ ಜಾರಿಗೆ ತರಲಾಗುತ್ತಿದೆ. ಪೋಷಕರ ಅಭಿಪ್ರಾಯದ ಮೇರೆಗೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆ ರಾಜ್ಯದ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ನಡೆಸಲಾಗಿತ್ತು, ಇದಕ್ಕಾಗಿ ಮಕ್ಕಳು ವಿಪರೀತವಾಗಿ ಮೊಬೈಲ್ ಬಳಕೆ ಮಾಡಿದ್ದರು. ಆದರೆ ಬರು ಬರುತ್ತಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಿದೆ ಎನ್ನಲಾಗಿದೆ.
JOB ALERT : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ
BIGG NEWS : ವಕ್ಫ್ ಬೋರ್ಡ್ ಹೊಸ ರೂಲ್ಸ್ : ಇನ್ಮುಂದೆ ‘ ಮದರಸಾಗಳಲ್ಲಿ ಡ್ರೆಸ್ ಕೋಡ್ ‘ಗಳು ಜಾರಿ | Waqf Board