Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: `E-PMSMA’ ಅಡಿಯಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಚಿಕಿತ್ಸೆ !

26/03/2026 4:35 AM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

26/03/2026 4:15 AM

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಬಿಸಿಲ ಝಳದಿಂದ ಜನರು ಕುಸಿದು ಬಿದ್ದಾಗ ಏನು ಮಾಡಬೇಕು? ಇಲ್ಲಿದೆ ಮಾಹಿತಿ | Heat Wave
KARNATAKA

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಬಿಸಿಲ ಝಳದಿಂದ ಜನರು ಕುಸಿದು ಬಿದ್ದಾಗ ಏನು ಮಾಡಬೇಕು? ಇಲ್ಲಿದೆ ಮಾಹಿತಿ | Heat Wave

By kannadanewsnow0921/03/2025 2:55 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಅದರ ಜೊತೆಗೆ ಅಲ್ಲಲ್ಲಿ ತೀವ್ರ ಬಿಸಿಲ ಝಳಕ್ಕೆ ಬಸವಳಿದು ಜನರು ಕುಸಿದು ಬಿದ್ದಿರುವುದಾಗಿಯೂ ವರದಿಯಾಗಿದೆ. ಹಾಗಾದ್ರೇ ಬಿಸಿಲಿನ ತಾಪಕ್ಕೆ ಜನರು ಕುಸಿದು ಬಿದ್ದಾಗ ಸಾರ್ವಜನಿಕರು ಏನು ಮಾಡಬೇಕು.? ಪ್ರಥಮ ಚಿಕಿತ್ಸೆ ಹೇಗೆ ನೀಡಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆಯ ಮಾಹಿತಿ ಮುಂದಿದೆ ಓದಿ.

ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದಿದೆ.

ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ – ಮೇ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಆದುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ಹವಾಮಾನ ಇಲಾಖೆ ನೀಡಿದೆ.

ಅತೀ ಹೆಚ್ಚು ತಾಪಮಾನ(heat wave)ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:

ಅತೀ ಹೆಚ್ಚು ತಾಪಮಾನದಿಂದ(heat wave) ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈಒರಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು.

  1. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್, ನಿಂಬೆವಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ)
    ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು.
  2. ರೋಗ ಲಕ್ಷಣಗಳು ಉಲ್ಬಣಗೊಂಡರ ಅಥವಾ ದೀರ್ಘಕಾಲದವರೆಗೆ ಇದರ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸುವುದು.
  3. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.
  4. ಅತೀ ಹೆಚ್ಚು ತಾಪಮಾನದಿಂದ(heat wave)ತುತ್ತಾದವರ ಮೇಲೆ ತಂಪಾದ ಒದ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿಸುವುದು.
  5. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು.
  6. ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

ಅತೀ ಹೆಚ್ಚು ತಾಪಮಾನದಿಂದ(heat wave) ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:

  1. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ).
  2. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಮ್ಮ ನೀರು ಕುಡಿಯುವುದು.
  3. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ‘ಪ್ಪಲಿಗಳನ್ನು ಬಳಸುವುದು.
  4. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕಲಸ ಮಾಡುವುದನ್ನು).
  5. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ / ಪಂಡಾಲ್‌ನ ವ್ಯವಸ್ಥೆ ಮಾಡುವುದು, ಉತ್ತಮ ಗಾಳಿಯ (Air Circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು, ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.
  6. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
  7. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
  8. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
  9. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
  10. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
  11. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
  12. ಮನೆಯನ್ನು ತಂಪಾಗಿರಿಸಲು ವರದಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.
  13. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕಾಪ್/ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ರಾನ್, ಎಲೆಕ್ಟೋಲೈಟ್/ಗೋಕೋಸ್/ ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು(heat wave) ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
  14. ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.

ಅತೀ ಹೆಚ್ಚು ತಾಪಮಾನದಿಂದ(heat wave) ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:

ಅತೀ ಹೆಚ್ಚು ತಾಪಮಾನದಿಂದ(heat wave) ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸಳತ, ಶಾಖದ ಬಳಲಿಕೆ ಮತ್ತು/ ಅಥವಾ ಶಾಖದ ಅಘಾತದಂತಹ (sun stroke) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕಳಕಂಡಂತಿವೆ.

  1. ಶಾಖ ಸೆಳೆತಗಳು: ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39c ಅಂದರೆ 102 ಫ್ಯಾರಾ ಹೀಟ್ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.
  2. ಶಾಖದ ಬಳಲಿಕೆ: ಆಯಾಸ, ದೌರ್ಬಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.
  3. ಶಾಖಾಘಾತ: ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಂದರೆ 104 ಫ್ಯಾರಾ ಹೀಟ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace

BREAKING : 2025-26ನೇ ಸಾಲಿನ ನಮ್ಮ `ಬಜೆಟ್’ ದೇಶದಲ್ಲೇ 5 ನೇ ದೊಡ್ಡ ಬಜೆಟ್ ಆಗಿದೆ : CM ಸಿದ್ದರಾಮಯ್ಯ | CM Siddaramaiah

Share. Facebook Twitter LinkedIn WhatsApp Email

Related Posts

ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: `E-PMSMA’ ಅಡಿಯಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಚಿಕಿತ್ಸೆ !

26/03/2026 4:35 AM1 Min Read

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

26/03/2026 4:15 AM2 Mins Read

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM1 Min Read
Recent News

ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: `E-PMSMA’ ಅಡಿಯಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಚಿಕಿತ್ಸೆ !

26/03/2026 4:35 AM

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

26/03/2026 4:15 AM

BREAKING : ವಂದೇ ಭಾರತ್’ನಲ್ಲಿ ಕಳಪೆ ಆಹಾರ ನೀಡಿದ ‘IRCTC’ಗೆ ಬಿಗ್ ಶಾಕ್ ; 10 ಲಕ್ಷ ರೂ. ದಂಡ ವಿಧಿಸಿ ಭಾರತೀಯ ರೈಲ್ವೆ ಆದೇಶ

25/03/2026 10:23 PM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM
State News
KARNATAKA

ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ: `E-PMSMA’ ಅಡಿಯಲ್ಲಿ ಗರ್ಭಿಣಿಯರಿಗೆ ಗುಣಮಟ್ಟದ ಚಿಕಿತ್ಸೆ !

By kannadanewsnow5726/03/2026 4:35 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ತಾಯಿ ಮರಣ ಪ್ರಮಾಣವನ್ನು ತಗ್ಗಿಸಲು ಮತ್ತು ಗರ್ಭಿಣಿಯರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕರ್ನಾಟಕ ಸರ್ಕಾರವು ಮಹತ್ವದ…

ರಾಜ್ಯ ಸರ್ಕಾರಿ ನೌಕರರಿಗೆ ‘ಸಾಧನ ಸಪ್ತಾಹ’ ತರಬೇತಿ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

26/03/2026 4:15 AM

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರದ ಅಸ್ತು

25/03/2026 10:02 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.