ಬೆಂಗಳೂರು: ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿಯವರು ಲೆಕ್ಕಾಚಾರ ಮಾಡಿದ್ದಾರೆ. ಬಿಜೆಪಿ ನಾಯಕರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಆ ಭ್ರಮೆಯಿಂದ ಹೊರ ತರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.
ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಅದರಿಂದ ಹೊರ ತರುತ್ತಾರೆ ಎಂದು ಹೇಳಿದರು.
ಶಾಲೆಗಳಿಗೆ ‘ಪಠ್ಯಪುಸ್ತಕ’ ಪೂರೈಕೆ ಸಮಸ್ಯೆಯಾಗಿಲ್ಲ – ಶಿಕ್ಷಣ ಇಲಾಖೆಯ ಸ್ಪಷ್ಟನೆ
ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.