ಉತ್ತರ ಪ್ರದೇಶ : ಕೌಶಂಬಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದ ಕಾರಣ ವ್ಯಕ್ತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆ ಬೆಳಕಿಗೆ ಬಂದಿದೆ.
BIGG NEWS : ಮೈಸೂರು ಮುಕ್ತ ವಿವಿ ಕುಲಪತಿ ವಿರುದ್ಧ ‘ಲೈಂಗಿಕ ಕಿರುಕುಳ’ ಆರೋಪ : ಆಡಿಯೋ ವೈರಲ್..!
ಇದರ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಆರೋಗ್ಯಾಧಿಕಾರಿ ಸುಷ್ಪೇಂದ್ರ ಕುಮಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಜರುಗಲಿಸಲಾಗುವುದು ಎಂದು ಹೇಳಿದ್ದಾರೆ.
BIGG NEWS : ಮೈಸೂರು ಮುಕ್ತ ವಿವಿ ಕುಲಪತಿ ವಿರುದ್ಧ ‘ಲೈಂಗಿಕ ಕಿರುಕುಳ’ ಆರೋಪ : ಆಡಿಯೋ ವೈರಲ್..!
ಇಲ್ಲಿನ ಗಲ್ಸುವಾ ಪ್ರದೇಶದ ನಿವಾಸಿ ತನ್ನ ಹೆಂಡತಿಯನ್ನು ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದರು. ತುಂಬು ಗರ್ಭಿಣಿಯಾಗಿದ್ದ ಕಾರಣ ಆಸ್ಪತ್ರೆಯ ವಾರ್ಡ್ನೊಳಗೆ ಕರೆದುಕೊಂಡು ಹೋಗಲು ಸ್ಟ್ರೆಚರ್ ಕೇಳಿದ್ದಾರೆ. ಆದರೆ, ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ಒದಗಿಸಿಲ್ಲ. ಆದ್ದರಿಂದ ತನ್ನ ಹೆಂಡತಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.