ಉತ್ತರಕನ್ನಡ : ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರಿನ ಕೆಳಗೆ ನಾಡಬಾಂಬ್ ಸ್ಫೋಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಅದೃಷ್ಟ ಪತ್ರಕರ್ತರ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗಾಗಿ ಭಾರಿ ಅನಾಹುತವೊಂದು ತಪ್ಪಿದೆ.
ಹೌದು ಇಂದು ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಕಾರ್ಯಕ್ರಮವೊಂದಕ್ಕೆ ಪತ್ರಕರ್ತರು ಸಂದೇಶ್ ದೇಸಾಯಿ ಎನ್ನುವವರ ಕಾರಿನಲ್ಲಿ ತೇರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಗೆ ಸಿಕ್ಕು ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪತ್ರಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.