ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಿಮ್ಸ್ ಅಂಗಡಿಯ ಮೇಲೆ ಪೊಲೀಸರು ರೇಡ್ ಮಾಡಿದ್ದು ಮುದ್ದುಮ್ ಕಾಲೋನಿ ನಿವಾಸಿ ಅಂಗಡಿ ಮಾಲೀಕ ಮಕ್ಬಾಲ್ ನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಬಂಧಿತನಿಂದ 2.39 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ರಿಫಿಲ್ ಗಳನ್ನು ಪೋಲಿಸಿರುವ ವಶಕ್ಕೆ ಪಡೆದುಕೊಂಡಿದ್ದಾರೆ. 54 ಇ ಸಿಗರೇಟ್ 154 ನಿಕೋಟಿನ ಲಿಕ್ವಿಡ್ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.