ಉತ್ತರಕನ್ನಡ : ಕ್ರಿಕೆಟ್ ಆಡುವ ವೇಳೆ ಸಿಡಿಲು ಬಡಿದು ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಬನವಾಸಿಯಲ್ಲಿ ನಡೆದಿದೆ.
ಹೌದು ಕ್ರಿಕೆಟ್ ಆಡುವಾಗ ಸಿಡಿಲು ಬಿಡುವುದು ಬಾಲಕ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಘಟನೆ ನಡೆದಿದೆ. ಬನವಾಸಿ ಕದಂಬ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದ ವಿದ್ಯಾರ್ಥಿ ಈ ವೇಳೆ ಸಿಡಿಲು ಬಡಿದು ಸಾಜಿದ್ ಶೇಖ್ (16) ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.