ಉತ್ತರಕಾಶಿ: ಪುರೋಳಕ್ಕೆ ಹೋಗುತ್ತಿದ್ದ ಕಾರೊಂದು ಆಳವಾದ ಕಂದಕಕ್ಕೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್ ಬಳಿ ಶನಿವಾರ ನಡೆದಿದೆ. ಘಟನೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಕಾಶಿಯಿಂದ ಪುರೋಳಕ್ಕೆ ಹೋಗುತ್ತಿದ್ದ ಕಾರು 400 ಮೀಟರ್ ಆಳದ ಕಮರಿಗೆ ಬಿದ್ದಿದೆ. ಧರಸು-ಯಮುಮೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಸಾಮ್ಲಿ ದೇವಿ ಎಂದು ಗುರುತಿಸಲಾಗಿದ್ದು, ಆಕೆಯನ್ನು ಬ್ರಹ್ಮಖಾಲ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದ್ದಾರೆ.
WATCH VIDEO: ಸೀರೆಯುಟ್ಟು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ 56 ವರ್ಷದ ಮಹಿಳೆ… ವಿಡಿಯೋ ವೈರಲ್
BIGG NEWS : `EPFO’ ಪಿಂಚಣಿದಾರರಿಗೆ `ಡಿಜಿಟಲ್ ಜೀವಂತ ಪ್ರಮಾಣ ಪತ್ರ’ದ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
SHOCKING NEWS: ಚಲಿಸುತ್ತಿದ್ದ ಕಾರಿನಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ: ಮಹಿಳೆ ಸೇರಿ ನಾಲ್ವರು ಅರೆಸ್ಟ್
WATCH VIDEO: ಸೀರೆಯುಟ್ಟು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ 56 ವರ್ಷದ ಮಹಿಳೆ… ವಿಡಿಯೋ ವೈರಲ್