ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದೆ. ಅಕ್ಟೋಬರ್ 08 ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ.. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ.
ಉತ್ತರಕಾಶಿ ಹಿಮಪಾತದಲ್ಲಿ ಒಟ್ಟು 29 ಮಂದಿ ಮೃತಪಟ್ಟಿದ್ದು, ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.
ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪ್ರದೇಶಕ್ಕೆ ಅಕ್ಟೋಬರ್ 4ರಂದು ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಮೊದಲ ದಿನವೇ 10 ಜನರ ಮೃತಪಟ್ಟಿದ್ದರು. ಆದರೆ, ಪ್ರತಿಕೂಲ ಹವಾಮಾನ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.
ರಕ್ಷಣಾ ಕಾರ್ಯಕ್ಕೆ 30 ಜನರ ತಂಡವನ್ನು ನಿಯೋಜಿಸಲಾಗಿದ್ದು, ಐಟಿಬಿಪಿ, ನೆಹರು ಪರ್ವತಾರೋಹಣ ಸಂಸ್ಥೆ, ವಾಯುಸೇನೆ, ಸೇನೆ, ಎಸ್ಡಿಆರ್ಎಫ್ ಹೀಗೆ ವಿವಿಧ ತಂಡಗಳ ಒಟ್ಟು 30 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
‘ರಾಜ್ಯದಲ್ಲಿ140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ : B.S ಯಡಿಯೂರಪ್ಪ | B.S Yadiyurappa
SHOCKING NEWS: ‘BMTCಯ ಬಹುತೇಕ ಸಿಬ್ಬಂದಿಗಳಿಗೆ ಹೃದಯ ಸಮಸ್ಯೆ- ಜಯದೇವ ಹೃದ್ರೋಗ ಆಸ್ಪತ್ರೆ ವರದಿ