ಶಿವಮೊಗ್ಗ: ಸಾಗರ ತಾಲ್ಲೂಕು ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರನ್ನಾಗಿ ಹಿರಿಯ ಪತ್ರಕರ್ತ, ವಕೀಲ ವಿ.ಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ವಿ.ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(2)ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವರೆಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ವಿ.ಶಂಕರ್ ಅವರನ್ನು ಸಾಗರ ತಾಲ್ಲೂಕು ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಏ.16ರ ನಾಳೆ ಕಲಬುರ್ಗಿಯಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ | Job Fair
‘ಅಯೋಧ್ಯೆ ರಾಮ ಮಂದಿರ ಟ್ರಸ್ಟ್’ಗೆ ಬಾಂಬ್ ಬೆದರಿಕೆ ಇ-ಮೇಲ್: ಎಫ್ಐಆರ್ ದಾಖಲು | Ayodhya Ram Mandir