ನವದೆಹಲಿ : ಸ್ವ ಪಕ್ಷದ ವಿರುದ್ಧವೇ ತಮ್ಮ ಅಸಮಾಧಾನವನ್ನು ಆಗಾಗ ಹೊರ ಹಾಕುತ್ತಿರುವ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿರುವ ಬಿಎಲ್ ಸಂತೋಷರನ್ನು ಭೇಟಿ ಮಾಡಿದ್ದಾರೆ.ವರಿಷ್ಟರ ಭೇಟಿ ಮಾಡಲು ಮಾಜಿ ಸಚಿವ ವಿ.ಸೋಮಣ್ಣ ನಿನ್ನೆ ದೆಹಲಿಗೆ ತೆರಳಿದ್ದಾರೆ. ಇಂದು ಬಿ ಎಲ್ ಸಂತೋಷರನ್ನು ಭೇಟಿ ಮಾಡಿದ್ದೂ, ಕೇಂದ್ರ ಸಚಿವ ಅಮಿತ್ ಶಾ ಬೇಟಿಗೆ ವಿ. ಸೋಮಣ್ಣ ಅವಕಾಶ ಕೇಳಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅಥವಾ ನಾಳೆ ಈ ಸೋಮಣ್ಣ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಜ್ಯದ ಬಿಜೆಪಿ ಘಟಕದ ನೂತನ ಅಧ್ಯಕ್ಷ ಹಾಗೂ ಪಕ್ಷ ನಾಯಕ ಕುರಿತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಲವು ನಾಯಕರಲ್ಲಿ ಅಸಮಾಧಾನ ಭಗಿಲೆದ್ದಿತ್ತು.
ಇದೇ ವಿಷಯವಾಗಿ ಬಸನಗೌಡ ಪಾಟೀಲ್ ಯತ್ನಾಳ ಕೂಡ ವಿಶ್ವ ಪಕ್ಷ ಬಿಜೆಪಿ ವಿರುದ್ಧವೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು ಇದೀಗ ಅವರು ಕೂಡ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮರಳಿದ್ದು ಇದೀಗ ಮಾಜಿ ಸಚಿವ ವಿ ಸೋಮಣ್ಣ ಕೂಡ ಬಿ ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಇಂದು ಸಂಜೆ ಅಥವಾ ನಾಳೆ ಅಮಿತ್ ಶಾ ಅವರನ್ನು ಕೂಡ ಭೇಟಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.