ಬೆಂಗಳೂರು :   ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ ಮಾಡಲಾಗಿದೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಟಾನಗೊಳಿಸಲು ಅಗತ್ಯವಾದ ಶಾಸನಾತ್ಮಕ ಬಲ ನೀಡುವ ಆಶಯದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ,.

ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಉದ್ದೇಶ ಹಾಗೂ ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದಿಂದ ರಾಜ್ಯದಲ್ಲಿ ಕನ್ನಡವನ್ನು ಬಲಪಡಿಸಲು ಅನುಕೂಲವಾಗಲಿದೆ. ಕನ್ನಡ ಮತ್ತು ಸಂಸ್ಕ್ರೃತಿ ಸಚಿವ ವಿ ಸುನೀಲ್ ಕುಮಾರ್ ಸದನಲ್ಲಿ ಮಸೂದೆ ಮಂಡಿಸಿದರು.

. ಅಧೀನ ನ್ಯಾಯಾಲಯ, ನ್ಯಾಯಾಧಿಕರ ಮತ್ತು ಇತರೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಗೆ, ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಕೈಗಾರಿಕಾ ಸಂಸ್ಥೆಗಳಿಗೆ ತೆರಿಗೆ ರಿಯಾಯಿತಿ, ಕನ್ನಡ ಅನುಷ್ಠಾನದ ಮೇಲ್ವಿಚಾರಣೆಗೆ ಸಮಿತಿ ಸ್ಥಾಪನೆಗೆ ಅವಕಾಶ ಕೊಡುವ ವಿಧೇಯಕವಾಗಿದೆ. ಮುಖ್ಯವಾಗಿ ರಾಜ್ಯದಲ್ಲಿ ಭೂಮಿ, ತೆರಿಗೆ ವಿನಾಯತಿ, ಅನುದಾನ ಮತ್ತಿತರ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೋದ್ಯಮದಲ್ಲಿ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ.

ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ದಂಡ ವಿಧಿಸಲು ಅವಕಾಶವಿದೆ.  ಮೊದಲನೇ ಸಲ ತಪ್ಪು ಮಾಡಿದ್ರೆ 5 ಸಾವಿರ ರೂ, ಎರಡನೇ ಸಲ ತಪ್ಪು ಮಾಡಿದ್ರೆ 10 ಸಾವಿರ ರೂ. ಮೂರನೇ ಸಲ ತಪ್ಪು ಮಾಡಿದ್ರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ದಾವಣಗೆರೆ ವಿವಿಯಲ್ಲಿ ‘FDA’ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ |Davanagere University Recruitment

BIGG NEWS : ರಾಜ್ಯದಲ್ಲಿ ‘SSLC’, ‘PUC’ ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ವಿಧೇಯಕ ಮಂಡನೆ

Share.
Exit mobile version