ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಯ ಭರ್ತಿ ಮಾಡಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ @dineshgrao ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/MZlcTqjI5C
— DIPR Karnataka (@KarnatakaVarthe) March 13, 2025
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಗೆ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 08 ಔಷಧ ಪರಿವೀಕ್ಷಕರು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಉಳಿದ 104 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 83 ಪರಿವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ ಮೇರೆಗೆ 67 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದಿನಾಂಕ: 23-06-2021ರಂದು ಇಲಾಖೆಗೆ ಆಯ್ಕೆಪಟ್ಟಿಯನ್ನು ಕಳುಹಿಸಲಾಗಿದೆ. ಸದರಿ ಆಯ್ಕೆಪಟ್ಟಿಯನ್ನು ವಿವಿಧ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು ವಿಚಾರಣಾ ಹಂತದಲ್ಲಿರುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ವಿವರಿಸಿದರು.
ಇಲಾಖೆಯಲ್ಲಿ ಖಾಲಿ ಇರುವ ಔಷಧ ಪರಿವೀಕ್ಷಕರ ಹುದ್ದೆಗಳ ಪ್ರಭಾರವನ್ನು ವೃತ್ತ ಕಚೇರಿಯ ಸಹಾಯಕ ಔಷಧ ನಿಯಂತ್ರಕರಿಗೆ ವಹಿಸಲಾಗಿರುತ್ತದೆ. ಸಹಾಯಕ ಔಷಧ ನಿಯಂತ್ರಕರುಗಳು ಅವರ ಕರ್ತವ್ಯಗಳ ಜೊತೆಯಲ್ಲಿ ಔಷಧ ಪರಿವೀಕ್ಷಕರ ಕೆಲಸವನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯಲ್ಲಿ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಅಂಗೀಕಾರ
ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿ 732 ರಿಂದ 1032ಕ್ಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್