ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗರ ಕೊಲೆ ನಂತರ ನಿನ್ನೆ ಹುಬ್ಬಳ್ಳಿಯಲ್ಲಿ ನಗರದ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ವನಹಳ್ಳಿ ಎನ್ನುವ ಪೂಜಾರಿ ಯನ್ನು ಹತ್ಯೆಗೈದ ಹಂತಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಹುಬ್ಬಳ್ಳಿ ಧಾರವಾಡ ಕಮಿಷನರ್ ಎನ್. ಶಶಿಕುಮಾರ್ ಅವರು, ಕಮರಿಪೇಟೆ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಬಂಧಿತ ವ್ಯಕ್ತಿಯಾಗಿದ್ದು, ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು.
ಈ ಹಿಂದೆಯು ದೇವೇಂದ್ರಪ್ಪನ ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೃತ್ಯವೂ ಸಹ ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.ದೇವೇಂದ್ರಪ್ಪನನ್ನು ಕೊಲೆ ಮಾಡಬೇಕೆಂದು ಕಳೆದ ಆರೂವರೆ ವರ್ಷದಿಂದ ಹೊಂಚು ಹಾಕಿಕೊಂಡು ಕೊಲೆ ಮಾಡಿರುವುದಾಗಿ ಆರೋಪಿಯು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಅವರು ತಿಳಿಸಿದರು.
ಮಾಟ-ಮಂತ್ರ, ವಶೀಕರಣವೇ ಹತ್ಯೆಗೆ ಕಾರಣ ಎಂಬುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ಹಿಂದೆಯು ದೇವೇಂದ್ರಪ್ಪನ ಹತ್ಯೆಗೆ ಯತ್ನ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕೃತ್ಯವೂ ಸಹ ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿರುವುದಾಗಿ ಶಶಿಕುಮಾರ್ ತಿಳಿಸಿದರು.