ಶಿವಮೊಗ್ಗ : ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ.ಈ ಬಗ್ಗೆ ಜೂ.7ರ ನಂತರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಅರಗ ಜ್ಞಾನೇಂದ್ರ ಹರಿಹಾಯ್ದರು.
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಅವರು ಬರೆದಿಟ್ಟಿರುವ ಡೆತ್ ನೋಟ್ ಅನೇಕ ಆಶ್ಚರ್ಯಕರ ಸಂಗತಿಗಳ ಹೊರಹಾಕಿದೆ. ದಲಿತರಿಗೆ ಪರಿಶಿಷ್ಟ ಜನಾಂಗದವರಿಗೆ ಮೀಸಲಿಟ್ಟ ಅನುದಾನ 187 ಕೋಟಿ ಅಕ್ರಮ ವರ್ಗಾವಣೆ ಆಗಿದೆ. ₹85 ಕೋಟಿಯಷ್ಟು ಅವ್ಯವಹಾರ ನಡೆದಿದೆ ಈ ಹಗರಣಕ್ಕೆ ಕಾರಣರಾರು ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಇದರ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಮಾಜಿ ಗೃಹಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರಾಜ್ಯ ಸರ್ಕಾರ ಮದ ಏರಿದ ಆನೆಯಂತೆ ವರ್ತಿಸುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ಸ್ಟ್ಯಾಂಪ್ ಡ್ಯೂಟಿ, ಮದ್ಯದ ಧಾರಣೆ ಮತ್ತು ವಿದ್ಯುತ್ ಶುಲ್ಕ ಏರಿಕೆ ಯಾಗಿದೆ. ಸಾರ್ವಜನಿಕರಿಗೆ ಆಗಿರುವ ಅನಾನುಕೂಲದ ಬಗ್ಗೆ ತಾವು ಕ್ಷಮೆ ಯಾಚಿಸುವುದಾಗಿಯೂ ತಿಳಿಸಿದರು. ರಾಜ್ಯ ಸರ್ಕಾರ ಹಗಲು ದರೋಡೆ ಮಾಡುವುದಕ್ಕೆ ಇಳಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ದಲ್ಲಿಯೇ ಹಣದ ವರ್ಗಾವಣೆ ನಡೆದಿದೆ ಎಂದು ಆರೋಪಿಸಿದರು.
ಮಂತ್ರಿಗಳ ಕಚೇರಿಯ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆಯೂ ಚಂದ್ರಶೇಖರನ್ ಡೆತ್ನೋಟ್ನಲ್ಲಿ ಬರೆದಿದ್ದಾರೆ. ದಲಿತರಿಗೆ ಬಡವರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡುತ್ತಿರುವುದು ಅವ್ಯಹತವಾಗಿ ಭ್ರಷ್ಟಾಚಾರ ನಡೆದಿದೆ. ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.