ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ ಕೋಟ್ಯಂತರ ವಂಚನೆ ಪ್ರಕರಣ ಸಂಬಂಧ, ಎಸ್ಐಟಿ ಅಧಿಕಾರಿಗಳು ಇಬ್ಬರು ನಿಗಮದ ಅಧಿಕಾರಿಗಳನ್ನು ಬಂಧಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಈ ಹಿಂದಿನ ಎಂ.ಡಿ ಜೆ.ಜೆ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಅವರನ್ನು ಬಂಧಿಸಿದೆ.
ಎಸ್ಐಟಿ ಅಧಿಕಾರಿಗಳು ಬಂಧಿಸಿರುವಂತ ಪದ್ಮನಾಭ್ ಹಾಗೂ ಪರುಶುರಾಮ್ ಅವರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸೋ ಸಾಧ್ಯತೆ ಇದೆ.
ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಂ.ಡಿಯಾಗಿದ್ದಂತ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದಂತ ಪರುಶುರಾಮ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿತ್ತು. ಅಲ್ಲದೇ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು.
Alert : ʻಮೊಬೈಲ್ʼ ಬಳಕೆದಾರೇ ಗಮನಿಸಿ : ಈ ಕರೆಗಳನ್ನು ಸ್ವೀಕರಿಸದಂತೆ ಸರ್ಕಾರ ಎಚ್ಚರಿಕೆ