ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಅಕ್ರಮ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿಯ ಹೆಸರು ತಳುಕು ಹಾಕಿತ್ತು. ಹೀಗಾಗಿ ಈ ಪ್ರಕರಣ ಕನ್ನಡಿಗರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜೆಡಿಎಸ್ ಪಕ್ಷವು, ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ಪಕ್ಷ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ, ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಕನ್ನಡಿಗರು ಪತ್ರ ಬರೆದಿದ್ದಾರೆ ಅಂತ ತಿಳಿಸಿದೆ.
ಗುಂಡಿಗೆ ಹೋದ ಹೆಣ, @INCKarnataka ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ತಿಳಿದಿದ್ದರೂ ಕೊನೆ ಪ್ರಯತ್ನವಾಗಿ ತೆಲಂಗಾಣದ ಮುಖ್ಯಮಂತ್ರಿ @revanth_anumula ಅವರಿಗೆ ಕನ್ನಡಿಗರ ಪತ್ರ. pic.twitter.com/NEw7H12oqk
— Janata Dal Secular (@JanataDal_S) June 8, 2024
ಕನ್ನಡಿಗರು ಬರೆದ ಪತ್ರದಲ್ಲಿ ಏನಿದೆ.?
ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 7187 ಕೋಟಿ ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.
ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.
ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಅಂತ ಕನ್ನಡಿಗರು ಪತ್ರದಲ್ಲಿ ತಿಳಿಸಿದ್ದಾರೆ.
BREAKING: ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಕೇಸ್: SITಯಿಂದ ಮತ್ತೋರ್ವ ಆರೋಪಿ ಅರೆಸ್ಟ್