ಬೆಂಗಳೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣದ ಸಂಬಂಧ, ಕೇಂದ್ರೀಯ ತನಿಖಾ ದಳ( Central Bureau of Investigation-CBI) ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಈ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪೂರ್ವ ವಲಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಜೆ ಮಹೇಶ್ ಎಂಬುವರು ಸಿಬಿಐಗೆ ದೂರು ನೀಡಿದ್ದರು. ಈ ದೂರಿನ ಸಂಬಂಧ ಇಬ್ಬರು ಖಾಸಗಿ ವ್ಯಕ್ತಿಗಳು, ಎಂ.ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್, ಉಪ ವ್ಯವಸ್ಥಾಪಕಿ ಡಿ ದೀಪಾ, ಅಧಿಕಾರಿಗಳಾದಂತ ವಿ ಕೃಷ್ಣಮೂರ್ತಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ಈಗಾಗಲೇ ಎಸ್ಐಟಿ ಅಧಿಕಾರಿಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಈಗ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದ್ದು, ಸಿಬಿಐ ಕೂಡ ತನಿಖೆಗೆ ಎಂಟ್ರಿಯಾಗೋ ಸಾಧ್ಯತೆಯಿದೆ.
ಓದುಗರೇ ಗಮನಿಸಿ: ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಇದೇ ಕೊನೆ ದಿನ….!
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ: ಎಂ.ಕೆ ವಿಶಾಲಾಕ್ಷಿ ಮಾಹಿತಿ